SHOCKING | ಮಂಚದಡಿಯಲ್ಲಿ ಬಾಂಬ್‌ ಬ್ಲಾಸ್ಟ್‌, ಸರ್ಕಾರಿ ಅಧಿಕಾರಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸರ್ಕಾರಿ ಅಧಿಕಾರಿಯೊಬ್ಬರು ಮನೆಯಲ್ಲಿ ಮಲಗಿದ್ದಾಗ ಮಂಚದಡಿ ಬಾಂಬ್​ ಸ್ಫೋಟಗೊಂಡು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ವೈಎಸ್‌ಆರ್ ಕಡಪಾ ಜಿಲ್ಲೆಯಲ್ಲಿ ಗ್ರಾಮ ಕಂದಾಯ ಸಹಾಯಕರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ.

ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಈ ಕೃತ್ಯದ ಹಿಂದಿನ ಉದ್ದೇಶವಿನ್ನೂ ಸ್ಪಷ್ಟವಾಗಿಲ್ಲ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಡಿ ನರಸಿಂಹುಲು ಅವರು ತಮ್ಮ ಮನೆಯಲ್ಲಿ ಮಲಗಿದ್ದಾಗ ಅವರ ಹಾಸಿಗೆಯ ಕೆಳಗೆ ಡಿಟೋನೇಟರ್ ಇರಿಸಿದ್ದ ಬಾಂಬ್ ಸ್ಫೋಟಗೊಂಡಿದೆ.

ನರಸಿಂಹುಲು ಸ್ಥಳದಲ್ಲೇ ಮೃತಪಟ್ಟರೆ, ಪತ್ನಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಂಪತಿಯ ಮಕ್ಕಳು ಮತ್ತೊಂದು ಕೋಣೆಯಲ್ಲಿ ಮಲಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಗ್ರಾಮಸ್ಥರು ಪರದಾಡುವಂತಾಯಿತು. ಘಟನೆಯ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!