spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಮುಂದೆ ಮತ್ತೆ ಬಾಂಬ್ ಸ್ಫೋಟ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಬಾಂಬ್‌ ಎಸೆದ ಒಂದು ವಾರದ ನಂತರ,
ಮಂಗಳವಾರ ಬೆಳಗ್ಗೆ ಅ ಅವರ ಮನೆಯ ಎದುರಿಗೆ ಬಾಂಬ್‌ ಬ್ಲಾಸ್ಟ್‌ ಮಾಡಲಾಗಿದೆ.
ಕಳೆದ ಬಾರಿ ನಡೆದ ಬ್ಲಾಸ್ಟ್‌ನ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಪೂರ್ಣಗೊಳಿಸುವ ಮುನ್ನವೇ ಈಗ ಪುನಃ ಮೂರು ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದೆ.ರಾಜ್ಯ ಪೊಲೀಸರು ಬಾಂಬ್ ತಂಡಕ್ಕೆ ಕರೆ ನೀಡಿದ್ದು, ಬಾಂಬ್ ಸ್ಫೋಟದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ತೃಣಮೂಲ ಕಾಂಗ್ರೆಸ್ ತನ್ನನ್ನು, ತಮ್ಮ ಕುಟುಂಬ ಸದಸ್ಯರನ್ನು ಮತ್ತು ತನ್ನ ಹತ್ತಿರದ ಜನರನ್ನು ಕೊಲ್ಲಲು ನಡೆಸಿದ ಯೋಜಿತ ದಾಳಿ ಇದಾಗಿದೆ ಎಂದು ಸಿಂಗ್ ಆರೋಪಿಸಿದ್ದಾರೆ.
‘ಇದೊಂದು ಯೋಜಿತ ದಾಳಿ. ಟಿಎಂಸಿ ಇದರ ಹಿಂದಿದೆ.ಅವರು ನನ್ನನ್ನು ಮತ್ತು ನನ್ನ ಜನರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದು ಬಂಗಾಳದ ಗೂಂಡಾರಾಜ್(ಕಾನೂನುಬಾಹಿರತೆ)’ ಎಂದು ಸಿಂಗ್ ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss