ಕಣ್ಣೂರಿನಲ್ಲಿ ಸ್ಫೋಟ: ಮನೆಯೊಂದರಲ್ಲಿ ಪತ್ತೆಯಾಯ್ತು ಒಂದಕ್ಕೂ ಅಧಿಕ ಬಾಂಬ್‌ಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮನೆಯಲ್ಲಿ ಬಾಂಬ್ ಸ್ಫೋಟಗೊಂಡು ವ್ಯಕ್ತಿಯೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.  ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ನಂತರ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿರುವ ಸಾಧ್ಯತೆ ಹೆಚ್ಚಿದ್ದು, ಹೆಚ್ಚಿನ ವಿವರಗಳು ಶೀಘ್ರವೇ ತಿಳಿಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಅಜಿತ್ ಕುಮಾರ್ ತಿಳಿಸಿದ್ದಾರೆ.

ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!