ಮಂತ್ರಾಲಯ ಮಠದ ಆವರಣದಲ್ಲಿ ಬಾಂಬ್ ಸ್ಕ್ವಾಡ್‌ನಿಂದ ತಪಾಸಣೆ, ಹೈ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ನಂತರ ಜನನಿಬಿಡ ಪ್ರದೇಶಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ.

ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಆಂಧ್ರಪ್ರದೇಶ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿರುವುದರಿಂದ ಗುರು ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಮಾಡಲಾಯಿತು.

ಮುನ್ನೆಚ್ಚರಿಕೆಯಾಗಿ ಹಾಗೂ ಜಾಗೃತಿ ಮೂಡಿಸಲು ಪೊಲೀಸರು ಮಂತ್ರಾಲಯದಲ್ಲಿ ತೀವ್ರ ತಪಾಸಣೆ ನಡೆಸಿದರು. ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್‌ನಿಂದ ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರಿ ಮಳಿಗೆಗಳು, ವಸತಿಗೃಹಗಳು, ಮಂತ್ರಾಲಯಕ್ಕೆ ಬರುವ ಬಸ್ ,ಕಾರುಗಳಲ್ಲಿ ಶೋಧ ನಡೆಸಿದರು. ಭಕ್ತರ ಬ್ಯಾಗ್‌ಗಳನ್ನ ಸಹ ತಪಾಸಣೆ ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!