ವಿಮಾನ ನಿಲ್ದಾಣದಲ್ಲಿ ಬಾಂಬ್‌ ಬೆದರಿಕೆ, ರಾಮೇಶ್ವರಂ ಕೆಫೆಗಿಂತ ದೊಡ್ಡ ಸ್ಫೋಟ ಎಂದ ಬಾಂಬರ್ಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ನಂತರ ಯಾವುದೇ ಬ್ಲಾಸ್ಟ್‌ ಬೆದರಿಕೆ ಬಂದರೂ ಪೊಲೀಸರು ಇನ್ನಷ್ಟು ಎಚ್ಚರ ವಹಿಸುತ್ತಿದ್ದಾರೆ.

ಇದೀಗ ಪಶ್ಚಿಮ ಬಂಗಾಳದ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶೋಧ ಕಾರ್ಯ ಬಳಿಕ ಇದೊಂದು ಫೇಕ್ ಬೆದರಿಕೆ ಎಂದು ಸಮಾಧಾನಗೊಂಡಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟ ತಂಡವೇ ಬಾಂಬ್ ಇಟ್ಟಿದೆ. ಇದೀಗ ಅದಕ್ಕಿಂತ ದೊಡ್ಡ ಬಾಂಬ್​​ಗಳನ್ನು ಇಡಲಾಗಿದೆ. ಒಂದೆಲ್ಲ, ಎರಡಲ್ಲ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಇಡಲಾಗಿದೆ. ಎಲ್ಲಾ ಬಾಂಬ್‌ಗಳು ಮಧ್ಯಾಹ್ನ 12.55 ಕ್ಕೆ ಸ್ಫೋಟಗೊಳ್ಳುತ್ತವೆ ಎಂದು ಮೇಲ್‌ನಲ್ಲಿ ತಿಳಿಸಲಾಗಿತ್ತು ಎಂದು ಹೇಳಿದೆ. ಶುಕ್ರವಾರ ಬೆಳಗ್ಗೆ 11.40ರ ಸುಮಾರಿಗೆ ಕೋಲ್ಕತ್ತಾ ವಿಮಾನ ನಿಲ್ದಾಣದ ವ್ಯವಸ್ಥಾಪಕರಿಗೆ ಮೇಲ್ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!