February 24, 2026
Tuesday, February 24, 2026
spot_img

ಬಾಂಬ್ ಬೆದರಿಕೆ: ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್‌ಬೆರಾದಲ್ಲಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಅವರ ಅಧಿಕೃತ ನಿವಾಸದಿಂದ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ತುರ್ತು ತನಿಖೆ ಆರಂಭಿಸಿದ್ದಾರೆ.

62 ವರ್ಷದ ಪ್ರಧಾನಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಳಿಕ ನಿವಾಸದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ನಡೆಸಿದ ಆಸ್ಟ್ರೇಲಿಯನ್ ಫೆಡರಲ್ ಪೊಲೀಸ್ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ತಿಳಿಸಿದೆ. ಸಾರ್ವಜನಿಕ ಸುರಕ್ಷತೆಗೆ ಯಾವುದೇ ಅಪಾಯ ಇಲ್ಲವೆಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

ಸಂಸತ್ ಭವನದ ಸಮೀಪದಲ್ಲಿರುವ ಪ್ರಧಾನಿಯ ನಿವಾಸದ ಬಳಿ ಭದ್ರತಾ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೆಲವೇ ಗಂಟೆಗಳ ಹಿಂದೆ ಅಲ್ಬನೀಸ್ ತಮ್ಮ ನಿವಾಸದಲ್ಲೇ ಮಾಧ್ಯಮ ಪ್ರತಿನಿಧಿಯೊಂದಿಗೆ ಸಂದರ್ಶನ ನಡೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ತಿಂಗಳುಗಳಲ್ಲಿ ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಹಾಗೂ ಹಲವು ಫೆಡರಲ್ ಸಂಸದರು ಭದ್ರತಾ ಬೆದರಿಕೆಗಳನ್ನು ಎದುರಿಸುತ್ತಿರುವುದು ಗಮನಾರ್ಹವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !