ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರಿಗೆ ಹೈದರಾಬಾದ್‌ನಿಂದ ಕರೆ ಮಾಡಿ, ಆತಂಕ ಸೃಷ್ಟಿಸಿದ್ದ ವ್ಯಕ್ತಿಯೊಬ್ಬ ಮತ್ತೆ ಕರೆ ಮಾಡಿ ಕ್ಷಮೆಯಾಚಿಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆದರಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ನಾನ್ ಕಾಗ್ನೈಸಬಲ್ ವರದಿ ದಾಖಲಿಸಿದ್ದು, ಆತನ ಬಂಧನಕ್ಕೆ ಪೊಲೀಸರು ಹೈದರಾಬಾದ್’ಗೆ ತೆರಳಲಿದ್ದಾರೆಂದು ಮೂಲಗಳು ತಿಳಿಸಿವೆ.
ಬೆಂಗಳೂರು ಮತ್ತು ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಇರಿಸಿರುವ ಬಗ್ಗೆ ಸೋಮವಾರ ಸಂಜೆ 6.30 ರ ಸುಮಾರಿಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ದೂರವಾಣಿ ಕರೆ ಬಂದಿತ್ತು.
ಕೆಲ ಸಮಯದ ಬಳಿಕ ಅದೇ ಸಂಖ್ಯೆಗೆ ಮತ್ತೆ ಕರೆ ಮಾಡಿದ ವ್ಯಕ್ತಿ, ಕ್ಷಮೆಯಾಚಿಸಿದ. ಮದ್ಯಪಾನ ಮಾಡಿದ್ದು, ತಪ್ಪಾಗಿ ಕರೆ ಮಾಡಿರುವುದಾಗಿ ತಿಳಿಸಿದ್ದರು ಎಂದು ವಿಮಾನ ನಿಲ್ದಾಣದ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.