ಹೊಸದಿಗಂತ ಡಿಜಿಟಲ್ ಡೆಸ್ಕ್:
ಇ-ಮೇಲ್ ಮೂಲಕ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೆಸೇಜ್ ಬಂದಿದ್ದು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ಮಾಡಲಾಗುತ್ತಿದೆ.
ಬೀದರ್ ನಗರದ ಚಿಕ್ಕಪೇಠ್‌ನಲ್ಲಿರುವ ಡಿಸಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಡಿಸಿ ಕಚೇರಿಯಲ್ಲಿ ಪೋಲಿಸರು ಹೈಅಲರ್ಟ್ ಆಗಿದ್ದು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.
ಡಿಸಿ ಕಚೇರಿಯ ಸಿಬ್ಬಂದಿಯನ್ನು ಹೊರಗಡೆ ಕಳಿಸಿ, ಪೊಲೀಸರು ಕಚೇರಿಯನ್ನ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಎಎಸ್ಪಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ಹಲವು ಅಧಿಕಾರಿಗಳು ಆಗಮಿಸಿ, ಪರಿಶೀಲನೆ ಮಾಡುತ್ತಿದ್ದಾರೆ.
SHOCKING | ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಕರೆ, ತೀವ್ರ ಶೋಧ

