ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ (New Delhi) ಚಾಣಕ್ಯಪುರಿಯಲ್ಲಿರುವ (Chanakyapuri) ಇಸ್ರೇಲ್ ರಾಯಭಾರಿ ಕಚೇರಿಗೆ (Israel Embassy) ಬಾಂಬ್ ಬೆದರಿಕೆ ಕರೆ (Bomb Threat Call) ಬಂದಿದೆ.

ಇಂದು ಸಂಜೆ 6 ಗಂಟೆ ಸುಮಾರಿಗೆ ದೆಹಲಿ ಪೊಲೀಸರಿಗೆ ಅಪರಿಚಿತ ಕರೆ ಬಂದಿದೆ. ಕರೆಯಲ್ಲಿ ಸ್ಫೋಟದ ಬಗ್ಗೆ ಅಧಿಕಾರಿಗಳಿಗೆ ವರದಿಯಾಗಿದೆ. ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ ಖಾಲಿ ಜಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಮಾಡಿದ ಅನಾಮಿಕ ವ್ಯಕ್ತಿ ತಿಳಿಸಿದ್ದಾನೆ.

ತಕ್ಷಣ ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರ ವಿಶೇಷ ಸೆಲ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ. ಕರೆ ಮಾಡಿದವರ ಗುರುತು, ಮತ್ತು ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!