ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ: ಆತಂಕ ಸೃಷ್ಟಿ

ಹೊಸದಿಗಂತ ವರದಿ, ಚಿಕ್ಕಬಳ್ಳಾಪುರ:
ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇರುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ ಬಂದಿರುವ ಪರಿಣಾಮ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬೆಳಗಿನ ಜಾವ 3.30 ಸಮಯದಲ್ಲಿ ಅಪರಿಚಿತನೊಬ್ಬ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ, ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ಈ ಹಿನ್ನೆಲೆ ಏರ್‌ಲೈನ್ಸ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.
ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಅವರ ನೇತೃತ್ವದಲ್ಲಿ ಬಾಂಬ್ ನಿಷ್ಟ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಆಗಮಿಸಿದ್ದು. ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!