BREAKING NEWS | ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ !

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ನಿನ್ನೆ ರಾತ್ರಿ 11:30 ಕ್ಕೆ ವ್ತಕ್ತಿ ಕರೆಮಾಡಿದ್ದು, ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ರಾಜಭವನಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಇರಬಹುದು ಎನ್ನಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ೫೦ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಪರಿಶೀಲನೆ ನಂತರ ಇದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!