ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಬಾಂಬ್ ಬೆದರಿಕೆ ಇ-ಮೇಲ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದ್ದು, ನಿಲ್ದಾಣದ ಎಲ್ಲೆಡೆ ಎಚ್ಚರಿಕೆ ನೀಡಲಾಗಿದೆ.
ಭದ್ರತಾ ಸಂಸ್ಥೆ ಮತ್ತು ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧಿಸಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇ-ಮೇಲ್ ಕಳುಹಿಸಿದವರನ್ನು ಹಿಡಿಯುವ ಪ್ರಯತ್ನ ಮಾಡಲಾಗುತ್ತಿದೆ.