ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ನಕಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.
ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದು. ವಿಷಯ ಬೆಳಕಿಗೆ ಬಂದ ತಕ್ಷಣ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಸುಳ್ಳು ಬಾಂಬ್ ಬೆದರಿಕೆ ಇರುವುದು ದೃಢಪಟ್ಟಿದೆ. ರಾಜಕಾರಣಿಗಳು ಮತ್ತು ಕ್ರಿಕೆಟಿಗರು ಸಾಮಾನ್ಯವಾಗಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ತಂಗುತ್ತಾರೆ.