ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್.. ಪ್ರಯಾಣಿಕರಲ್ಲಿ ಆತಂಕ ಸೃಷ್ಟಿ

ಹೊಸದಿಗಂತ ಬೆಳಗಾವಿ:

ಇಲ್ಲಿನ ಸಾಂಬ್ರಾದಲ್ಲಿನ ವಿಮಾನ ನಿಲ್ದಾಣಕ್ಕೆ ಈ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕ ಸೃಷ್ಟಿಸಿದೆ.
ವಿಮಾನ ನಿಲ್ದಾಣದ ಸ್ಪೋಟಿಸುವ ಬೆದರಿಕೆ ಹಾಕಿರುವ ಅಪರಿಚಿತರು, ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್‌ ಅವರ ಇ ಮೇಲ್‌ಗೆ ಬೆದರಿಕೆ ಪತ್ರ ಕಳುಹಿಸಿದ್ದಾರೆ.

ಚೆನ್ನೈನಿಂದ ಬಾಂಬ್ ಬೆದರಿಕೆ ಇ ಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗಿದೆ.
ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ತ್ಯಾಗರಾಜ ಅವರು ಪ್ರಕರಣ ದಾಖಲಿಸಿದ್ದಾರೆ.
ತನಿಖೆ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಜಗದೀಶ್ ರೋಹನ ಅವರು, ಬೆದರಿಕೆ ಹಿನ್ನಲೆಯಲ್ಲಿ ಇಡೀ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಇದೊಂದು ಹುಸಿ ಇ‌ ಮೇಲ್ ಕರೆ ಇರಬಹುದು. ಆದರೂ ಕೂಡ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!