ಹೊಸದಿಗಂತ ಡಿಜಿಟಲ್ ಡೆಸ್ಕ್;
ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ನೋಯ್ಡಾದಲ್ಲಿ ಬಂಧಿಸಿದ್ದಾರೆ.
ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಬಂಧಿತ ವ್ಯಕ್ತಿ. ಆರೋಪಿ ಅಶ್ವಿನ್ ಕುಮಾರ್ ನೋಯ್ಡಾದ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಬಳಸಿ ಬಾಂಬ್ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ತನಿಖೆಯ ಸಮಯದಲ್ಲಿ, ಬೆದರಿಕೆ ಹಾಕಲು ಬಳಸಲಾದ ಫೋನ್ ಮತ್ತು ಸಿಮ್ ಅನ್ನು ಸಹ ಅಪರಾಧ ವಿಭಾಗ ವಶಪಡಿಸಿಕೊಂಡಿದೆ. ಸದ್ಯ ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಗುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಯಲಿದೆ.