ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.
ಮಂಗಳವಾರ (ಜ.6) ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕಚೇರಿಯನ್ನು ಸ್ಫೋಟಗೊಳಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ. ಕೂಡಲೇ ಅಲ್ಲಿನ ಅಧಿಕಾರಿಗಳು ಕೋರಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೋರಮಂಗಲ ಪೊಲೀಸರು ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ತಂಡಗಳನ್ನು ಕರೆಸಿ, ಕಚೇರಿಯ ಒಳಗೆ ಹಾಗೂ ಹೊರಗಡೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಹಾಗೂ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಹಾಗಾಗಿ ಪೊಲೀಸರು ಇದೊಂದು ಬೆದರಿಕೆಯ ಮೇಲ್ ಎಂದು ತೀರ್ಮಾನಿಸಿದ್ದಾರೆ.
ಈ ಸಂಬಂಧ ಪಾಸ್‌ಪೋರ್ಟ್ ಕಚೇರಿಯ ಅಧಿಕಾರಿಗಳು ಕೋರಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೇಲ್ ಬಂದಿರುವ ಮೂಲದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

