June 19, 2026
Friday, June 19, 2026
spot_img

ಹೈದರಾಬಾದ್ IMD ಕಚೇರಿಗೆ ಬಂತು ಬಾಂಬ್ ಬೆದರಿಕೆ ಮೇಲ್: ಪೊಲೀಸರಿಂದ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್ ನ ಭಾರತೀಯ ಹವಾಮಾನ ಇಲಾಖೆ (IMD) ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ಸಿಕ್ಕ ತಕ್ಷಣವೇ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಚೇರಿ ಆವರಣದಲ್ಲಿ ಪರಿಶೀಲನೆ ನಡೆಸಿದರು.

ಇಂದು ಬೆಳಗ್ಗೆ ಸುಮಾರು 6.30ರ ವೇಳೆಗೆ IMD ಕಚೇರಿಯ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿತ್ತು. ಆದರೆ ಬೆಳಗ್ಗೆ 9.30ರ ಸುಮಾರಿಗೆ ಅದನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇಮೇಲ್‌ನಲ್ಲಿ ಕಚೇರಿಯ ಆರು ವಿಭಿನ್ನ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಮತ್ತು ಅವು ಸ್ಫೋಟಗೊಳ್ಳಬಹುದು ಎಂದು ಹೇಳಲಾಗಿತ್ತು.

ಇದನ್ನೂ ಓದಿ:

ಸಂದೇಶದ ಬಗ್ಗೆ ಮಾಹಿತಿ ಸಿಕ್ಕ ಬಳಿಕ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ತಂಡ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡದ ಒಳಭಾಗ ಮತ್ತು ಸುತ್ತಮುತ್ತ ಪ್ರದೇಶವನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದರು. ಪರಿಶೀಲನೆಯ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೂಲಕ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದ್ದು, ಕಚೇರಿಯ ಕಾರ್ಯಚಟುವಟಿಕೆಗಳು ನಂತರ ಸಾಮಾನ್ಯ ಸ್ಥಿತಿಗೆ ಮರಳಿದೆ. ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !