ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.
ಈ ಕುರಿತು ಜಂಟಿ ಪೊಲೀಸ್ ಆಯುಕ್ತ ಶರದ್ ಸಿಂಘಾಲ್ ಅವರು ಮಾಹಿತಿ ನೀಡಿದ್ದು, ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಪರಾಧ ವಿಭಾಗಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಮಾಹಿತಿ ಬೆನ್ನಲ್ಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.
ಇದಕ್ಕೂ ಮುನ್ನ ಗುಜರಾತ್ ಮುಖ್ಯಮಂತ್ರಿ ಕಚೇರಿ ಹಾಗೂ ಗಾಂಧೀನಗರದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿತ್ತು.