ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದಿದೆ ಎಂದು ವರದಿಯಾಗಿದೆ.
ನವದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಪೊಲೀಸ್ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದಿದೆ. ತಕ್ಷಣವೇ ಎರಡು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.