KKR- CSK​ ಪಂದ್ಯಕ್ಕೆ ಬಾಂಬ್ ಬೆದರಿಕೆ ಸಂದೇಶ: ಪೊಲೀಸ್ ಬಿಗಿ ಬಂದೋಬಸ್ತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL 57 ನೇ ಪಂದ್ಯ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿದೆ. ಈ ಮದ್ಯೆ, ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದ ಮೇಲೆ ಬಾಂಬ್ ಹಾಕುವುದಾಗಿ ಬೆದರಿಕೆಯ ಇಮೇಲ್ ಬಂದಿದೆ.

ಉಭಯ ತಂಡಗಳ ನಡುವಿನ ಪಂದ್ಯ ಆರಂಭವಾದ ಕೆಲವು ನಿಮಿಷಗಳ ನಂತರ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧಿಕೃತ ಇಮೇಲ್ ಐಡಿಗೆ ಅಪರಿಚಿತ ಇಮೇಲ್ ಖಾತೆಯಿಂದ ಬಾಂಬ್ ಬೆದರಿಕೆಯ ಸಂದೇಶ ಬಂದಿದೆ.

ಬಾಂಬ್ ಬೆದರಿಕೆಯ ನಂತರ, ಕೋಲ್ಕತ್ತಾ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು ಸ್ಥಳದಲ್ಲಿ ಶೋಧನೆ ಆರಂಭಿಸಿವೆ. ಇಡೀ ಕ್ರೀಡಾಂಗಣ ಸಂಕೀರ್ಣವನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ.

ಅದೇ ಸಮಯದಲ್ಲಿ, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಗುಪ್ತಚರ ತಂಡಗಳನ್ನು ಸಹ ಕ್ರೀಡಾಂಗಣದಲ್ಲಿ ನಿಯೋಜಿಸಲಾಗಿದೆ. ಈ ಮೇಲ್ ಸೈಬರ್ ತಂತ್ರದ ಭಾಗವೇ ಅಥವಾ ಹುಸಿ ಬೆದರಿಕೆಯ ತಂತ್ರವೇ ಎಂಬುದರ ಬಗ್ಗೆಯೂ ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!