ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಪಾಕಿಸ್ತಾನದ ನಂಬರ್‌ನಿಂದ ಸಂದೇಶ ಬಂದಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಚೇರಿ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಪೊಲೀಸರ ಪ್ರಕಾರ, ವ್ಯಕ್ತಿ ತನ್ನನ್ನು ಮಲಿಕ್ ಶಹಬಾಜ್ ಹುಮಾಯೂನ್ ರಜಾ ಎಂದು ಪರಿಚಯಿಸಿಕೊಂಡಿರುವ ವ್ಯಕ್ತಿಯೊಬ್ಬ ಪಾಕಿಸ್ತಾನಿ ನಂಬರ್‌ನಿಂದ ಮುಂಬೈ ಟ್ರಾಫಿಕ್ ಪೊಲೀಸರಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಕಚೇರಿ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ವಾಟ್ಸಾಪ್ ಸಂದೇಶ ಬಂದಿದೆ” ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ವರ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.