ಮಾಸ್ಕೋದಿಂದ ದೆಹಲಿಯತ್ತ ಆಗಮಿಸುತ್ತಿದ್ದ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರ ಪ್ರಕಾರ, ಶುಕ್ರವಾರ ಮುಂಜಾನೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯು ವಿಮಾನದಲ್ಲಿ ಬಾಂಬ್‌ ಇರಿಸಿರುವ ಇ-ಮೇಲ್ ಎಚ್ಚರಿಕೆಯನ್ನು ಸ್ವೀಕರಿಸಿದೆ. “ಮಾಸ್ಕೋದಿಂದ ಬರುತ್ತಿದ್ದ, ಸುಮಾರು 3.20 ಕ್ಕೆ ದೆಹಲಿಯಲ್ಲಿ ಇಳಿಯಬೇಕಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಕೇಳಿಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ತಕ್ಷಣವೇ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. 386 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತ ವಿಮಾನ ದೆಹಲಿಗೆ ಬಂದಿಳಿದಿದ್ದು, 16 ಸಿಬ್ಬಂದಿಯನ್ನು ತಕ್ಷಣವೇ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವಿಮಾನವನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲಾಗಿದ್ದು, ಕೂಲಂಕುಷವಾಗಿ ತಪಾಸಣೆ ನಡೆಸಲಾಗಿದೆ. ಸದ್ಯಕ್ಕೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಇದು ಅಂತಾರಾಷ್ಟ್ರೀಯ ಬೆದರಿಕೆ ಕರೆಯಾಗಿದೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!