ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮತ್ತು ಜಾಮಾ ಮಸೀದಿಗೆ ಗುರುವಾರ ಬಾಂಬ್ ಬೆದರಿಕೆ ಕರೆ ಬಂದಿದೆ.
ದೆಹಲಿ ಪೊಲೀಸರ ಪ್ರಕಾರ, ಕೆಂಪು ಕೋಟೆ ಮತ್ತು ಜಾಮಾ ಮಸೀದಿಯನ್ನು ಗುರಿಯಾಗಿಸಿಕೊಂಡು ಹುಸಿ ಬಾಂಬ್ ಬೆದರಿಕೆ ಬಂದಿದ್ದು,ಪರಿಶೀಲನೆಯ ಸಮಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಮತ್ತು ಆ ಕರೆಯನ್ನು ಸುಳ್ಳು ಎಂದು ಘೋಷಿಸಲಾಗಿದೆ.
ಸ್ಮಾರಕಗಳ ಆವರಣದಲ್ಲಿ ಬಾಂಬ್ ಇರುವ ಬಗ್ಗೆ ಬೆಳಿಗ್ಗೆ 9.03 ಕ್ಕೆ ಕರೆ ಬಂದಿದ್ದು, ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಾವು ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನದ ಮೂಲಕ ತೆರಳಿ ಸಂಪೂರ್ಣ ಶೋಧ ನಡೆಸಿದ್ದೇವೆ. ಆದಾಗ್ಯೂ, ಸ್ಥಳಗಳಲ್ಲಿ ಅನುಮಾನಾಸ್ಪದ ವಸ್ತು ಏನೂ ಕಂಡುಬಂದಿಲ್ಲ ಎಂದು ಅವರು ಹೇಳಿದರು.