ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿದ್ದ ವಿಮಾನವನ್ನು ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರಿಸಿದ ಸಿಐಎಸ್‌ಎಫ್ ಮತ್ತು ಪೊಲೀಸರು ತಪಾಸಣೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ ಹುಸಿ ಬಾಂಬ್ ಬೆದರಿಕೆ ಎಂದು ತಿಳಿಸಿದ್ದಾರೆ.
ಇನ್ನು ಇದಕ್ಕೆ ಸಂಬಂಧಿಸಿದಂತೆ ರಾಯ್‌ಪುರ ಪೊಲೀಸರು ಒಬ್ಬ ಪ್ರಯಾಣಿಕನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಯ್‌ಪುರ ಎಸ್‌ಎಸ್‌ಪಿ ಸಂತೋಷ್ ಸಿಂಗ್ ಪ್ರಕಾರ, ಬಂಧಿತ ಪ್ರಯಾಣಿಕರೊಂದಿಗೆ ಪ್ರಾಥಮಿಕ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.
ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.