ಬೆಂಗಳೂರು 6 ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ನಗರದ ವಿನ್ಸೆಂಟ್ ಪಲ್ಲೋಟಿ ಹಾಗೂ ಎಬಿನೈಜರ್ ಇಂಟರ್ ನ್ಯಾಷನಲ್ ಸ್ಕೂಲ್ ಸಹಿತ 6 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿರೋದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಮಹದೇವಪುರದ ಗೋಪಾಲನ್‌ ಇಂಟರ್ ನ್ಯಾಷನಲ್ ಶಾಲೆ, ವರ್ತೂರಿನ ಡೆಲ್ಲಿ ಪಬ್ಲಿಕ್ ಶಾಲೆ, ಮಾರತ್ ಹಳ್ಳಿ ನ್ಯೂ ಅಕಾಡೆಮಿ‌ ಶಾಲೆ, ಹೆಣ್ಣೂರಿನ ಸೆಂಟ್ ವಿನ್ಸೆಂಟ್ ಸ್ಕೂಲ್, ಇಂಡಿಯನ್ ಪಬ್ಲಿಕ್ ಸ್ಕೂಲ್‌ ಹಾಗೂ ಹೆಬ್ಬಗೋಡಿ ಎಬಿನೈಜರ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲೆಗಳಿಂದ ಸಿಬ್ಬಂದಿ ಹೊರ ಬಂದಿದ್ದಾರೆ.
ಹೊರ ವಲಯದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳೀಯರ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ದಳ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!