ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಿಂದ ಹೊರಟಿದ್ದ ಅಕಾಸಾ ಏರ್ ವಿಮಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಉತ್ತರ ಪ್ರದೇಶದ ವಾರಣಾಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಬಾಂಬ್ ಬೆದರಿಕೆ ದೃಢಪಡಿಸಿದ ಅಕಾಸಾ ಏರ್ ವಕ್ತಾರರು, ಕ್ಯೂಪಿ 1498 ವಿಮಾನದ ಕ್ಯಾಪ್ಟನ್’ಗೆ ವಾರಣಾಸಿ ಏರ್ ಟ್ರಾಫಿಕ್ ಕಂಟ್ರೋಲರ್ ಅವರಿಂದ ‘ತುರ್ತು ಎಚ್ಚರಿಕೆ’ ಬಂದಿದೆ ಎಂದು ಹೇಳಿದರು.
ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ಕಾರ್ಯವಿಧಾನಗಳ ಅನುಸರಿಸಿ 166 ಜನರೊಂದಿಗೆ ವಿಮಾನವನ್ನು ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಾವು ಮುಂಬೈನ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸುವ ಕಾರ್ಯವಿಧಾನವನ್ನು ಪ್ರಾರಂಭಿಸಿದ್ದೇವೆ ಎಂದು ವಕ್ತಾರರು ತಿಳಿಸಿದ್ದಾರೆ.