ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು,ಈ ಹಿನ್ನೆಲೆ ಇಂದು (ಮಂಗಳವಾರ) ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.
ವಿಮಾನದಲ್ಲಿ 130 ಪ್ರಯಾಣಿಕರಿದ್ದು, ಸುರಕ್ಷಿತವಾಗಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಮುಂಬೈನಿಂದ ಹೊರಡಬೇಕಿದ್ದ ಮೂರು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಅದರಲ್ಲಿ ನ್ಯೂಯಾರ್ಕ್‌ಗೆ ಸಂಚರಿಸಬೇಕಿದ್ದ ಏರ್ ಇಂಡಿಯಾ ವಿಮಾನವು ನವದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.