ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ! ಏನದು ಇಮೇಲ್ ಸಂದೇಶ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಆರು ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ಬೆದರಿಕೆ ಸಂದೇಶ ನೀಡಲಾಗಿತ್ತು. ನಕಲಿ ಬಾಂಬ್ ಬೆದರಿಕೆ ಕರೆ ಎಂದು ಖಚಿತವಾಗಿತ್ತು. ಈ ಘಟನೆಯ ನಂತರ ಇದೀಗ ಮತ್ತೊಮ್ಮೆ ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದೆ.

ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಧ್ಯರಾತ್ರಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಮೇಲ್ ರವಾನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು, ಸ್ಫೋಟಕ ದಳ ಹಾಗೂ ಶ್ವಾನ ದಳದಿಂದ ಶಾಲೆಯಲ್ಲಿ ತಪಾಸಣೆ ನಡೆಸಲಾಯಿತು. ಶಾಲಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!