ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ರವಾನಿಸಲಾಗಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿರುವ ಬಿಷಪ್ ಕಾಟನ್ ಶಾಲೆಯ ವೆಬ್ಸೈಟ್ಗೆ ಕಿಡಿಗೇಡಿಗಳಿಂದ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಬೆಳಗ್ಗೆ ಬಂದಿದ್ದ ಸಂದೇಶವನ್ನು ಆಡಳಿತ ಮಂಡಳಿ ಮಧ್ಯಾಹ್ನ ಗಮನಿಸಿದ್ದಾರೆ. ಬೆದರಿಕೆ ಸಂದೇಶದ ಮಾಹಿತಿ ತಿಳಿದು ಪೊಲೀಸರಿಂದ ಪರಿಶೀಲನೆ ಮಾಡಿದ್ದಾರೆ. ಬಳಿಕ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಬಿಎಂಎಸ್, ಎಂಎಸ್ ರಾಮಯ್ಯ ಹಾಗೂ ಬಿಐಟಿ ಇಂಜಿನಿಯರಿಂಗ್ ಕಾಲೇಜಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಇದರಿಂದ ಕಾಲೇಜು ಆವರಣಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.