ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ : 48 ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿಗರ ಆತಂಕಕ್ಕೀಡುಮಾಡಿದ್ದ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಎಫ್‌ಐಆರ್‌ಗಳು ದಾಖಲಾಗಿವೆ.

ಬೆಂಗಳೂರಿನ ೩೦ಕ್ಕೂ ಹೆಚ್ಚು ಶಾಲೆಗಳಿಗೆ ಏಕಕಾಲಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿತ್ತು. ತಕ್ಷಣವೇ ಬಾಂಬ್ ನಿಷ್ಕ್ರಿಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಆರಂಭಿಸಿದ್ದರು. ಮಕ್ಕಳನ್ನು ತಕ್ಷಣವೇ ಶಾಲೆಯಿಂದ ಮನೆಗೆ ಕಳುಹಿಸಲಾಗಿತ್ತು.

ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿದ್ದು, ಇದೊಂದು ಹುಸಿ ಬಾಂಬ್ ಕರೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದಿದೆ. ಪೋಷಕರು ಭಯಪಡಬೇಕಿಲ್ಲ ಎಂದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಠಾಣೆಗಳಲ್ಲಿ ಒಟ್ಟಾರೆ 48 ಎಫ್‌ಐಆರ್ ದಾಖಲಾಗಿದೆ. ಎಲ್ಲಾ ಎಫ್‌ಐಆರ್‌ಗಳನ್ನು ಕ್ರೂಡೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!