ಹೊಸದಿಗಂತ ಡಿಜಿಟಲ್ ಡೆಸ್ಕ್;
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕೇಸ್ ಗೆ ಸಂಬಂಧಿಸಿದಂತೆ 10 ಪ್ರಕರಣಗಳು ದಾಖಲಾಗಿವೆ.
ಒಂದು ವಾರದಲ್ಲಿ ಬೆಂಗಳೂರು ಏರ್ ಪೋರ್ಟ್ ಗೆ 10 ಬಾರಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ದುಷ್ಕರ್ಮಿಗಳು ಅಕ್ಟೋಬರ್ 22ರಿಂದ ಅ.26ರವರೆಗೆ ಹತ್ತು ಬಾರಿ ಬಾಂಬ್ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ.ಎಕ್ಸ್ ಖಾತೆ, ಇ-ಮೇಲ್ ಮೂಲಕವಾಗಿ ಇಂಡಿಗೋ, ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದು, ಏರ್ ಪೋರ್ಟ್ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿವೆ.
ದೇವನಹಳ್ಳಿ ಎಸಿಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.