Tuesday, December 23, 2025

‘ಬ್ರಿಟಿಷ್ ಏರ್‌ವೇಸ್’ ವಿಮಾನಕ್ಕೆ ಬಾಂಬ್ ಬೆದರಿಕೆ: ಸಡನ್ ಲ್ಯಾಂಡಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲಂಡನ್‌ನಿಂದ ಹೈದರಾಬಾದ್‌ಗೆ ತೆರಳುವ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದು, ಸುರಕ್ಷಿತವಾಗಿ ವಿಮಾನ ಲ್ಯಾಂಡಿಂಗ್ ಆಗಿರುವುದಾಗಿ ವಿಮಾನ ನಿಲ್ದಾಣದ ಮೂಲಗಳು ಮಂಗಳವಾರ ತಿಳಿಸಿವೆ.

ಸೋಮವಾರ ಹೀಥ್ರೂದಿಂದ ಹೈದರಾಬಾದ್‌ಗೆ ಹೊರಟಿದ್ದ ಬಿಎ 277 ವಿಮಾನಕ್ಕೆ ಬಾಂಬ್ ಇಡಲಾಗಿದೆ ಎಂದು ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರಾಹಕ ಸೇವಾ ಕೇಂದ್ರಕ್ಕೆ ಬೆದರಿಕೆಯ ಮೇಲ್ ಬಂದಿತ್ತು.

ಸುರಕ್ಷತಾ ಮಾನದಂಡಗಳನ್ನು ಅನುಸರಿಸಿದ ನಂತರ ಸುರಕ್ಷಿತವಾಗಿ ವಿಮಾನ ಲ್ಯಾಂಡಿಂಗ್ ಆಯಿತು ಎಂದು ಮೂಲಗಳು ಹೇಳಿವೆ.

error: Content is protected !!