ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂಡೀಗಢದ ಮಾನಸಿಕ ಆಸ್ಪತ್ರೆಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿ ಮಾಡಿದೆ. ಕೂಡಲೇ ರೋಗಿಗಳನ್ನು ಬೇರೆಡೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಅದೇ ಇಮೇಲ್ ಅನ್ನು ದೆಹಲಿ ಮತ್ತು ದಕ್ಷಿಣ ಭಾರತದ ಹಲವಾರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇ-ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆಯ ಬಗ್ಗೆ ನಮಗೆ ಆಸ್ಪತ್ರೆಯಿಂದ ಮಾಹಿತಿ ಬಂದಿದೆ, ತಪಾಸಣೆ ವೇಳೆ ಏನೂ ದೊರೆತಿಲ್ಲ, ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆದ ಬಳಿಕ ಆಸ್ಪತ್ರೆ ತೆರೆಯಲಾಗುವುದು ಎಂದು ಡಿಎಸ್ಪಿ ದಲ್ಬೀರ್ ಸಿಂಗ್ ತಿಳಿಸಿದ್ದಾರೆ.