ಚಂಡೀಗಢದ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಆಸ್ಪತ್ರೆಗೆ ಬಾಂಬ್​ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಂಡೀಗಢದ ಮಾನಸಿಕ ಆಸ್ಪತ್ರೆಗೆ ಬಾಂಬ್​ ಬೆದರಿಕೆಯ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿ ಮಾಡಿದೆ. ಕೂಡಲೇ ರೋಗಿಗಳನ್ನು ಬೇರೆಡೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

ಅದೇ ಇಮೇಲ್ ಅನ್ನು ದೆಹಲಿ ಮತ್ತು ದಕ್ಷಿಣ ಭಾರತದ ಹಲವಾರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇ-ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆಯ ಬಗ್ಗೆ ನಮಗೆ ಆಸ್ಪತ್ರೆಯಿಂದ ಮಾಹಿತಿ ಬಂದಿದೆ, ತಪಾಸಣೆ ವೇಳೆ ಏನೂ ದೊರೆತಿಲ್ಲ, ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆದ ಬಳಿಕ ಆಸ್ಪತ್ರೆ ತೆರೆಯಲಾಗುವುದು ಎಂದು ಡಿಎಸ್​ಪಿ ದಲ್ಬೀರ್​ ಸಿಂಗ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!