ಛತ್ರಪತಿ ಶಿವಾಜಿ ಮಹಾರಾಜ್ ರೈಲ್ವೇ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, ಅಲರ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಛತ್ರಪತಿ ಶಿವಾಜಿ ಮಹಾರಾಜ್ ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದೇನೆ  ಎಂದು ವ್ಯಕ್ತಿಯೊಬ್ಬ ಮುಂಬೈ ಪೊಲೀಸ್​ ಅಧಿಕಾರಿಗಳಿಗೆ ಕರೆ ಮಾಡಿದ್ದಾನೆ.

ಕೂಡಲೇ ಸ್ಥಳೀಯ ಪೊಲೀಸರು ಹಾಗೂ ಸರ್ಕಾರಿ ರೈಲ್ವೆ ಅಧಿಕಾರಿಗಳು ಫುಲ್​ ಅಲರ್ಟ್​ ಆಗಿದ್ದು, ಎಲ್ಲಾ ಸಿಎಸ್ಎಂಟಿ ಠಾಣೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಜೊತೆಗೆ ಬಾಂಬ್​ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಆದರೆ ಪೊಲೀಸ್​ ಅಧಿಕಾರಿಗಳಿಗೆ ಯಾವ ಕಡೆಯಲ್ಲೂ ಬಾಂಬ್​ ಸಿಗಲಿಲ್ಲ.

ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹುಸಿ ಬಾಂಬ್​ ಬೆದರಿಕೆ ಹಾಕಿದ ಶಂಕಿತನನ್ನು ಸಚಿನ್ ಶಿಂಧೆ ಎಂದು ಗುರುತಿಸಲಾಗಿದೆ. ಕರೆ ಮಾಡಿ ಸ್ವಲ್ಪ ಸಮಯದ ನಂತರ ಆರೋಪಿ ಸಚಿನ್​ ಶಿಂಧೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಆ ಕೂಡಲೇ ತೀವ್ರ ಹುಡುಕಾಟ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!