ದೇಶದ ವಿವಿಧೆಡೆ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ.

ಮೊನ್ನೆಯಷ್ಟೇ ಸಿಆರ್​ಪಿಎಫ್ ಶಾಲೆ ಎದುರು ಸ್ಫೋಟ ಸಂಭವಿಸಿತ್ತು. ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್​ಪಿಎಫ್ ಶಾಲೆಯ ಬಳಿ ಭಾರಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 7.50ರ ಸುಮಾರಿಗೆ ಸಂಭವಿಸಿದ ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಸೆಕ್ಟರ್ 14ರಲ್ಲಿರುವ ಸಿಆರ್​ಪಿಎಫ್ ಶಾಲೆಯ ಬಳಿಗೆ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ವಿಧಿವಿಜ್ಞಾನ ತಂಡಗಳು ಆಗಮಿಸಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!