ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕುವ ಪ್ರವೃತ್ತಿ ಹೆಚ್ಚಾಗುತ್ತಿದೆ, ದೆಹಲಿಯಿಂದ ಲಂಡನ್ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಈ ಹಿನ್ನೆಲೆಯಲ್ಲಿ ಜರ್ಮನಿಯ ಫ್ರಾಂಕ್ಫರ್ಟ್ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ವಿಸ್ತಾರ UK17 ವಿಮಾನವು ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಮಾನವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಕ್ಟೋಬರ್ 18 ರಂದು ದೆಹಲಿಯಿಂದ ಲಂಡನ್ಗೆ ತೆರಳುತ್ತಿದ್ದ ವಿಸ್ತಾರ ವಿಮಾನಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಹಾಕಲಾಗಿದೆ. ಶಿಷ್ಟಾಚಾರದ ಪ್ರಕಾರ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ, ಪೈಲಟ್ಗಳು ವಿಮಾನವನ್ನು ಫ್ರಾಂಕ್ಫರ್ಟ್ಗೆ ಮಾರ್ಗ ಬದಲಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.