BIGG NEWS: ದೆಹಲಿ ಶಾಲೆಗೆ ಬಾಂಬ್​ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಇರುವ ಇಂಡಿಯನ್ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ದೆಹಲಿಯ ದಕ್ಷಿಣ ಜಿಲ್ಲೆಯಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇರುವ ಕುರಿತು ಇಮೇಲ್ ಅನ್ನು ಕಳುಹಿಸಲಾಗಿದೆ.

ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ಈ-ಮೇಲ್ ಸಂದೇಶ ಕಳುಹಿಸುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ಈಗಾಗಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯು ದೌಡಾಯಿಸಿದೆ. ಇವರ ಜೊತೆಗೆ ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ

ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ತನಿಖೆ ಮುಂದುವರಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!