ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಥ್ರೆಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ. ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ಪರಿಶೀಲಿಸಲಾಗುತ್ತಿದೆ.

ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

ಇತ್ತೀಚೆಗೆ ವಿಮಾನ, ಶಾಲೆ, ಏರ್‌ಪೋರ್ಟ್‌, ಹೊಟೇಲ್‌ಗಳಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಇದರಲ್ಲಿ ಹೆಚ್ಚಿನವು ಫೇಕ್‌ ಬೆದರಿಕೆ ಕರೆಗಳಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!