September 4, 2026
Friday, September 4, 2026
spot_img

ನಾಲ್ಕು ದಿನದ ಅಂತರದಲ್ಲಿ ಕೊಡಗು ಕೋಟ್೯ಗೆ ಮತ್ತೊಂದು ಬಾಂಬ್ ಬೆದರಿಕೆ: ಈ ಬಾರಿ ಕೇಂದ್ರೀಯ ವಿದ್ಯಾಲಯವೂ ಟಾರ್ಗೆಟ್?

ಹೊಸದಿಗಂತ ವರದಿ ಮಡಿಕೇರಿ:

ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದ್ದಾರೆ.

ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. ಶಾಲೆ ಮತ್ತು ನ್ಯಾಯಾಲಯದ ಆವರಣದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ನ್ಯಾಯಾಲಯದ ಒಳಗೆ ವಕೀಲರು ಮತ್ತು ಸಿಬ್ಬಂದಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಮಂಗಳವಾರವಷ್ಟೇ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಮತ್ತೆ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಏಕಕಾಲಕ್ಕೆ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !