BIG NEWS | ಮುಂಬೈ ತಾಜ್‌ ಹೊಟೇಲ್, ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂಬೈ ತಾಜ್‌ ಹೊಟೇಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಲಾಗಿದೆ (Bomb Threat) ಎಂದು ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಬೆದರಿಕೆ ಕರೆ ಬಂದಿದೆ.

ಬೆದರಿಕೆ ಕರೆ ಬಂದ ಹಿನ್ನೆಲೆ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಪೊಲೀಸರು (Mumbai Police) ಸ್ಥಳಕ್ಕೆ ದೌಡಾಯಿಸಿ ತೀವ್ರ ತಪಾಸಣೆ ನಡೆಸಿದ್ದಾರೆ.

ಈ ವೇಳೆ ಅನುಮಾನಾಸ್ಪದವಾದ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ದೂರವಾಣಿ ಕರೆಯ ಲೊಕೇಶನ್‌ ಉತ್ತರ ಪ್ರದೇಶದಲ್ಲಿ (Uttar Pradesh) ಪತ್ತೆಯಾಗಿದೆ ಎಂದಿರುವ ಪೊಲೀಸರು ಕಿಡಿಗೇಡಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯ ಸುಮಾರು 130 ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!