ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಜಿಲ್ಲಾ ನ್ಯಾಯಾಲಯಕ್ಕೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕಲಾಪ ಸ್ಥಗಿತಗೊಳಿಸಿ, ಅಲ್ಲಿದ್ದವರನ್ನು ಹೊರಗೆ ಕಳುಹಿಸಲಾಯಿತು.
ಬಾಂಬ್ ಬೆದರಿಕೆ ನಂತರ, ನ್ಯಾಯಾಂಗ ಅಧಿಕಾರಿಗಳು, ವಕೀಲರು, ದಾವೆದಾರರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಕೋರ್ಟ್ ಆವರಣದಿಂದ ಸ್ಥಳಾಂತರಿಸಲಾಯಿತು ಮತ್ತು ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ಧಾವಿಸಿದ್ದು, ಆವರಣದಲ್ಲಿ ಸಂಪೂರ್ಣ ಶೋಧ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

