ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾಗುವ ರಾಜ ಭವನಕ್ಕೆ ಬಂದಿರುವ ಬಾಂಬ್ ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಂಕಿತನೋರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ರಾಜಭವನ ಪರಿಸರದಲ್ಲಿ ಈಗಾಗಲೇ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಮೊಕ್ಕಾಂ ಹೂಡಿದ್ದು, ತನಿಖೆ ಇನ್ನಷ್ಟು ತೀವ್ರಗೊಂಡಿದೆ. ಇದೇ ಸಂದರ್ಭ ಪೊಲೀಸರು ಹಲವರನ್ನು ವಿಚಾರಣೆಗೊಳಪಡಿಸಿದ್ದಾರೆ. ರಾಜಭವನಕ್ಕೆ ಇನ್ನಷ್ಟು ಭದ್ರತೆ ಒದಗಿಸಲಾಗಿದೆ.
ಇತ್ತೀಚೆಗಷ್ಟೇ ಬೆಂಗಳೂರಿನಾದ್ಯಂತ ಸುಮಾರು 44 ಶಾಲೆಗಳಿಗೆ ಅನಾಮಧೇಯ ಇಮೇಲ್‌ಗಳ ಮೂಲಕ ‘ಸ್ಫೋಟ’ ಬೆದರಕೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಈ ಬೆಳವಣಿಗೆ ನಡೆದಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ.