ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಸೋಮವಾರ ರಾತ್ರಿ ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ಬೆನ್ನಲ್ಲೇ ಕಾರ್ಯಪ್ರವೃತ್ತಗೊಂಡ ಸೈಬರ್ ಪೊಲೀಸರು ಈ ಬೆದರಿಕೆ ಬಂದ ಮೂಲ ಪತ್ತೆ ಹಚ್ಚಿದ್ದಾರೆ.
ಸೈಬರ್ ಪೊಲೀಸರ ಪ್ರಕಾರ ತಮಿಳುನಾಡಿನಿಂದ ಈ ಬೆದರಿಕೆ ಇಮೇಲ್ ಕಳುಹಿಸಲಾಗಿದೆ ಎಂದಿದೆ.
ಈ ಇಮೇಲ್‌ನಲ್ಲಿ ರಾಮ ಮಂದಿರದ ನಿರ್ಮಾಣ ಸ್ಥಳದಲ್ಲಿ ಬಾಂಬ್ ಸ್ಫೋಟಿಸುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.
ಸ್ಥಳೀಯ ಪೊಲೀಸರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಿದ್ದಾರೆ, ಸೈಬರ್ ಸೆಲ್ ಬೆದರಿಕೆಯ ಮೂಲವನ್ನು ಸಕ್ರಿಯವಾಗಿ ತನಿಖೆ ನಡೆಸಿದೆ. ಇತ್ತ ಸ್ಥಳೀಯ ಪೊಲೀಸರು ರಾಮ ಮಂದಿರದ ಸುತ್ತಮುತ್ತ ಭದ್ರತೆ ಹೆಚ್ಚಿಸಿದ್ದಾರೆ.