ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ರಾಮ ಮಂದಿರ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ನಮ್ಮ ಗುರಿ ಎಂದು ಹೇಳಿದ್ದ ಆರೋಪಿಗಳಾದ ತಾಹರ್ ಸಿಂಗ್, ಓಂಪ್ರಕಾಶ್ ಮಿಶ್ರಾರನ್ನು ಬಂಧಿಸಲಾಗಿದೆ.
ಇಬ್ಬರೂ ಗೊಂಡ ನಗರದ ನಿವಾಸಿಗಳಾಗಿದ್ದು, ಇನ್ಸ್ಟಿಟ್ಯೂಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.