ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೆಲಹೊತ್ತು ಆಂತಕವನ್ನು ಸೃಷ್ಟಿ ಮಾಡಿತ್ತು.
ಕೇರಳ ಪೊಲೀಸರ ಪ್ರಧಾನ ಕಚೇರಿಗೆ ಸಚಿವಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಕೂಡಲೇ ಅಲರ್ಟ್ ಆದ ಪೊಲೀಸರು ಸೆಕ್ರೆಟರಿಯೆಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ನಡೆಸಿದ್ದಾರೆ.
ಆದರೆ ಈ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅದಾಗ್ಯೂ ಈ ಹುಸಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.