ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ದುಬೈಗೆ ತೆರಳುವ ಖಾಸಗಿ ವಿಮಾನಯಾನ ಸಂಸ್ಥೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು ಈ ಸಂಬಂಧ ಬಾಂಬ್ ಇರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆಯೇ ಎಂದು ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸ್ ಕಂಟ್ರೋಲ್ ರೂಂಗೆ ಅನಾಮಧೇಯ ಕರೆ ಬಂದಿದ್ದು, ವಿಮಾನ ನಿಲ್ದಾಣದ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ.
ಸುಮಾರು 160 ಪ್ರಯಾಣಿಕರೊಂದಿಗೆ ಬೆಳಿಗ್ಗೆ 7.20 ಕ್ಕೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದೊಳಗೆ ಭದ್ರತಾ ಏಜೆನ್ಸಿಗಳು ಶೋಧ ನಡೆಸುತ್ತಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿರುವುದಾಗಿ ಮೂಲಗಳು ವರದಿ ಮಾಡಿವೆ.
ಕರೆ ಮಾಡಿದವರ ಪತ್ತೆಗೆ ವಿಚಾರಣೆ ಆರಂಭಿಸಲಾಗಿದೆ.