ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು Morgue999lol ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ(Terrorizers 111 )ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು.
ಉಗ್ರ ಸಂಘಟನೆಯ ಹೆಸರು ಉಲ್ಲೇಖ ಮಾಡಿ ಬಾಂಬ್ ಬೆದರಿಕೆಯೊಡ್ಡಲಾಗಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು, ಈ ಹಿನ್ನೆಲೆ ಬಹಳ ಆತಂಕ ಸೃಷ್ಟಿಯಾಗಿತ್ತು.