ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾರಿಗೂ ಆತಂಕ ಬೇಡ ಎಂದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ ಮೇಲ್ ಬಂದಿದ್ದು, ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿಂದ ಕರೆ ಬಂದಿದೆ ಎನ್ನುವ ಬಗ್ಗೆ ತನಿಖೆಯಾಗುತ್ತಿದೆ. ಪೋಷಕರಿಗೆ ಆತಂಕ ಬೇಡ. ಕೆಟ್ಟ ಹೆಸರು ತರಬೇಕು ಎಂದು ಹೇಳಿ ಈ ರೀತಿ ಮಾಡುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ತಗೆದುಕೊಂಡು ತಪಾಸಣೆ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ. ಬೆದರಿಕೆ ಕರೆ ಮಾಡಿದವರನ್ನು ಬಂಧನ ಮಾಡುತ್ತೇವೆ. ಕಾಲ್ ಡಿಟೈಲ್ಸ್ ಚೆಕ್ ಮಾಡಲು ಹೇಳಿದ್ದೇವೆ‌‌‌. ಎಲ್ಲಾ ರೀತಿ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ತಗೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!