ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆಗೆ ಗ್ರೀನ್ ಸಿಗ್ನಲ್ ಕೊಟ್ಟ ಬಾಂಬೆ ಹೈಕೋರ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆಗೆ ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್‌ ರದ್ದುಗೊಳಿಸಿದ್ದು, ಈ ಮೂಲಕ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್.ಜಿ.ಡಿಗೆ ಅವರ ವಿಭಾಗೀಯ ಪೀಠವು, ಪೌಡರ್‌ ಉತ್ಪಾದನೆ ಮತ್ತು ಮಾರಾಟಕ್ಕೆ ಕಂಪನಿಗೆ ಅನುಮತಿ ನೀಡಿದೆ.
ಮಹಾರಾಷ್ಟ್ರ ಸರ್ಕಾರ ಜಾನ್ಸನ್ಸ್‌ ಬೇಬಿ ಪೌಡರ್‌ನಲ್ಲಿ ಹಾನಿಕಾರಕ ಅಂಶಗಳಿದ್ದು, ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸಬೇಕು ಎಂದು 2022ರ ಸೆಪ್ಟೆಂಬರ್‌ 15ರಂದು ಸೂಚನೆ ನೀಡಿ ಕಂಪನಿಯ ಪರವಾನಗಿ ರದ್ದುಗೊಳಿಸಿತ್ತು.

ಇದರ ವಿರುದ್ಧ ಕಂಪನಿಯು ಹೈಕೋರ್ಟ್‌ ಮೊರೆ ಹೋಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. ಸೌಂದರ್ಯವರ್ಧಕ ಉತ್ಪನ್ನಗಳಿಗೆ ಗುಣಮಟ್ಟ ಮತ್ತು ಸುರಕ್ಷತೆಯ ಮಾನದಂಡ ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಉತ್ಪನ್ನಗಳಲ್ಲಿ ಸ್ವಲ್ಪ ವ್ಯತ್ಯಯ ಉಂಟಾದರೆ ಇಡೀ ಉತ್ಪಾದನಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು ಸಮಂಜಸವಾಗಿ ತೋರುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!